ಸೂರಾ As-Saff — The Ranks
ಸೂರಾ As-Saff (The Ranks) — 61/114 · 14 ಆಯತ್‌ಗಳು. ಅರೇಬಿಕ್ ಪಠ್ಯ ಮತ್ತು ಕನ್ನಡ ಅನುವಾದದೊಂದಿಗೆ ಓದಿ ಮತ್ತು ಕೇಳಿ.
سَبَّحَ لِلَّهِ مَا فِي ٱلسَّمَٰوَٰتِ وَمَا فِي ٱلۡأَرۡضِۖ وَهُوَ ٱلۡعَزِيزُ ٱلۡحَكِيمُ
ವಿಶ್ವಾಸಿಗಳೇ, ಅಲ್ಲಾಹನ ಕೋಪಕ್ಕೆ ತುತ್ತಾಗುವವರನ್ನು ನಿಮ್ಮ ಆಪ್ತರಾಗಿಸಿಕೊಳ್ಳಬೇಡಿ. ಧಿಕ್ಕಾರಿಗಳು, ಗೋರಿಗಳಲ್ಲಿರುವವರ (ಮರು ಜೀವನದ) ಕುರಿತು ನಿರಾಶರಾಗಿರುವಂತೆಯೇ, ಅವರು (ಅಲ್ಲಾಹನ ಕೋಪಕ್ಕೆ ಪಾತ್ರರಾದವರು) ಪರಲೋಕದ ಕುರಿತು ನಿರಾಶರಾಗಿರುವರು
Ayah 1يَٰٓأَيُّهَا ٱلَّذِينَ ءَامَنُواْ لِمَ تَقُولُونَ مَا لَا تَفۡعَلُونَ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಎಲ್ಲವೂ ಅಲ್ಲಾಹನ ಪಾವಿತ್ರವನ್ನು ಜಪಿಸುತ್ತವೆ. ಅವನು ಪ್ರಬಲನೂ ಯುಕ್ತಿವಂತನೂ ಆಗಿರುವನು
Ayah 2كَبُرَ مَقۡتًا عِندَ ٱللَّهِ أَن تَقُولُواْ مَا لَا تَفۡعَلُونَ
ವಿಶ್ವಾಸಿಗಳೇ, ನೀವು ಮಾಡದ್ದನ್ನು ಯಾಕೆ ಹೇಳುತ್ತೀರಿ
Ayah 3إِنَّ ٱللَّهَ يُحِبُّ ٱلَّذِينَ يُقَٰتِلُونَ فِي سَبِيلِهِۦ صَفࣰّ ا كَأَنَّهُم بُنۡيَٰنࣱ مَّرۡصُوصࣱ
ನೀವು ಮಾಡದ್ದನ್ನು ಹೇಳುವುದು ಅಲ್ಲಾಹನ ದೃಷ್ಟಿಯಲ್ಲಿ ತೀರಾ ಅಪ್ರಿಯವಾಗಿದೆ
Ayah 4وَإِذۡ قَالَ مُوسَىٰ لِقَوۡمِهِۦ يَٰقَوۡمِ لِمَ تُؤۡذُونَنِي وَقَد تَّعۡلَمُونَ أَنِّي رَسُولُ ٱللَّهِ إِلَيۡكُمۡۖ فَلَمَّا زَاغُوٓاْ أَزَاغَ ٱللَّهُ قُلُوبَهُمۡۚ وَٱللَّهُ لَا يَهۡدِي ٱلۡقَوۡمَ ٱلۡفَٰسِقِينَ
ತಾವು ಸೀಸ ಹೊಯ್ದ ಗೋಡೆಗಳೆಂಬಂತೆ ಸಾಲಾಗಿ (ಸಂಘಟಿತರಾಗಿ) ತನ್ನ ಮಾರ್ಗದಲ್ಲಿ ಹೋರಾಡುವವರನ್ನು ಅಲ್ಲಾಹನು ಖಂಡಿತ ಪ್ರೀತಿಸುತ್ತಾನೆ
Ayah 5وَإِذۡ قَالَ عِيسَى ٱبۡنُ مَرۡيَمَ يَٰبَنِيٓ إِسۡرَٰٓءِيلَ إِنِّي رَسُولُ ٱللَّهِ إِلَيۡكُم مُّصَدِّقࣰ ا لِّمَا بَيۡنَ يَدَيَّ مِنَ ٱلتَّوۡرَىٰةِ وَمُبَشِّرَۢا بِرَسُولࣲ يَأۡتِي مِنۢ بَعۡدِي ٱسۡمُهُۥٓ أَحۡمَدُۖ فَلَمَّا جَآءَهُم بِٱلۡبَيِّنَٰتِ قَالُواْ هَٰذَا سِحۡرࣱ مُّبِينࣱ
ನನ್ನ ಜನಾಂಗದವರೇ, ನಾನು ನಿಮ್ಮೆಡೆಗೆ ಬಂದಿರುವ, ಅಲ್ಲಾಹನ ದೂತನೆಂಬುದನ್ನು ಅರಿತಿದ್ದೂ ನೀವೇಕೆ ನನ್ನನ್ನು ಹಿಂಸಿಸುತ್ತಿರುವಿರಿ? ಎಂದು ಮೂಸಾ ತಮ್ಮ ಜನಾಂಗದವರೊಡನೆ ಕೇಳಿದರು. ಅವರು (ಮೂಸಾರ ಜನಾಂಗದವರು) ವಕ್ರ ಬುದ್ಧಿ ತೋರಿದಾಗ ಅಲ್ಲಾಹನು ಅವರ ಮನಸ್ಸುಗಳನ್ನು ವಕ್ರಗೊಳಿಸಿಬಿಟ್ಟನು. ಅಲ್ಲಾಹನು ಅವಿಧೇಯರಿಗೆ ಸರಿದಾರಿಯನ್ನು ತೋರಿಸುವುದಿಲ್ಲ
Ayah 6وَمَنۡ أَظۡلَمُ مِمَّنِ ٱفۡتَرَىٰ عَلَى ٱللَّهِ ٱلۡكَذِبَ وَهُوَ يُدۡعَىٰٓ إِلَى ٱلۡإِسۡلَٰمِۚ وَٱللَّهُ لَا يَهۡدِي ٱلۡقَوۡمَ ٱلظَّٰلِمِينَ
‘‘ಇಸ್ರಾಈಲರ ಸಂತತಿಗಳೇ, ನಾನು ನಿಮ್ಮ ಬಳಿಗೆ ಅಲ್ಲಾಹನ ದೂತನಾಗಿ ಬಂದಿರುತ್ತೇನೆ. ನಿಮ್ಮ ಬಳಿ ಈಗಾಗಲೇ ಇರುವ ತೌರಾತನ್ನು ನಾನು ಸಮರ್ಥಿಸುತ್ತೇನೆ. ಮತ್ತು ನಾನು, ನನ್ನ ಬಳಿಕ ಬರಲಿರುವ ಅಹ್ಮದ್ ಎಂಬ ಹೆಸರಿನ ದೂತರ ಕುರಿತು ಶುಭವಾರ್ತೆ ನೀಡುವವನಾಗಿರುತ್ತೇನೆ’’ ಎಂದು ಮರ್ಯಮರ ಪುತ್ರ ಈಸಾ ಹೇಳಿದ್ದರು. ಕೊನೆಗೆ ಅವರು (ಆ ದೂತರು) ಸ್ಪಷ್ಟ ಪುರಾವೆಗಳೊಂದಿಗೆ ಅವರ ಬಳಿಗೆ ಬಂದಾಗ ಅವರು ಇದೆಲ್ಲಾ ಸ್ಪಷ್ಟ ಮಾಟಗಾರಿಕೆಯಾಗಿದೆ ಎಂದು ಬಿಟ್ಟರು
Ayah 7يُرِيدُونَ لِيُطۡفِـُٔواْ نُورَ ٱللَّهِ بِأَفۡوَٰهِهِمۡ وَٱللَّهُ مُتِمُّ نُورِهِۦ وَلَوۡ كَرِهَ ٱلۡكَٰفِرُونَ
ತನ್ನನ್ನು ಇಸ್ಲಾಮಿನ ಕಡೆಗೆ ಕರೆಯಲಾದಾಗ, ಅಲ್ಲಾಹನ ಮೇಲೆ ಸುಳ್ಳಾರೋಪಗಳನ್ನು ಹೊರಿಸುವವನಿಗಿಂತ ದೊಡ್ಡ ಅಕ್ರಮಿ ಯಾರಿದ್ದಾನೆ? ಅಲ್ಲಾಹನು ಅಕ್ರಮಿಗಳಿಗೆ ಸರಿದಾರಿಯನ್ನು ತೋರುವುದಿಲ್ಲ
Ayah 8هُوَ ٱلَّذِيٓ أَرۡسَلَ رَسُولَهُۥ بِٱلۡهُدَىٰ وَدِينِ ٱلۡحَقِّ لِيُظۡهِرَهُۥ عَلَى ٱلدِّينِ كُلِّهِۦ وَلَوۡ كَرِهَ ٱلۡمُشۡرِكُونَ
ಅವರು ಅಲ್ಲಾಹನ ಬೆಳಕನ್ನು ತಮ್ಮ ಬಾಯಿಗಳಿಂದ (ಊದಿ) ನಂದಿಸಬಯಸುತ್ತಾರೆ. ಅಲ್ಲಾಹನಂತೂ ತನ್ನ ಬೆಳಕನ್ನು ಸಂಪೂರ್ಣ ವ್ಯಾಪಿಸಿಯೇ ತೀರುವನು. ಧಿಕ್ಕಾರಿಗಳಿಗೆ ಅದು ಎಷ್ಟೇ ಅಪ್ರಿಯವಾಗಿದ್ದರೂ ಸರಿಯೇ
Ayah 9يَٰٓأَيُّهَا ٱلَّذِينَ ءَامَنُواْ هَلۡ أَدُلُّكُمۡ عَلَىٰ تِجَٰرَةࣲ تُنجِيكُم مِّنۡ عَذَابٍ أَلِيمࣲ
ಅವನೇ, ಮಾರ್ಗದರ್ಶನ ಮತ್ತು ಸತ್ಯಧರ್ಮದೊಂದಿಗೆ ತನ್ನ ದೂತನನ್ನು ಕಳುಹಿಸಿ ಕೊಟ್ಟವನು. ಅದನ್ನು ಅವನು, ಇತರ ಎಲ್ಲ ಧರ್ಮಗಳೆದುರು ವಿಜಯಿಯಾಗಲಿಕ್ಕಾಗಿ ಕಳಿಸಿರುವನು. ಅದು ಬಹುದೇವಾರಾಧಕರಿಗೆ ಎಷ್ಟೇ ಅಪ್ರಿಯವಾಗಿದ್ದರೂ ಸರಿ
Ayah 10تُؤۡمِنُونَ بِٱللَّهِ وَرَسُولِهِۦ وَتُجَٰهِدُونَ فِي سَبِيلِ ٱللَّهِ بِأَمۡوَٰلِكُمۡ وَأَنفُسِكُمۡۚ ذَٰلِكُمۡ خَيۡرࣱ لَّكُمۡ إِن كُنتُمۡ تَعۡلَمُونَ
ವಿಶ್ವಾಸಿಗಳೇ, ನಾನು ನಿಮಗೆ ನಿಮ್ಮನ್ನು (ನರಕದ) ಕಠಿಣ ಶಿಕ್ಷೆಯಿಂದ ರಕ್ಷಿಸುವ ವ್ಯವಹಾರವೊಂದನ್ನು ತಿಳಿಸಲೇ
Ayah 11يَغۡفِرۡ لَكُمۡ ذُنُوبَكُمۡ وَيُدۡخِلۡكُمۡ جَنَّٰتࣲ تَجۡرِي مِن تَحۡتِهَا ٱلۡأَنۡهَٰرُ وَمَسَٰكِنَ طَيِّبَةࣰ فِي جَنَّٰتِ عَدۡنࣲۚ ذَٰلِكَ ٱلۡفَوۡزُ ٱلۡعَظِيمُ
ನೀವು ಅಲ್ಲಾಹನಲ್ಲಿ ಮತ್ತು ಅವನ ದೂತರಲ್ಲಿ ನಂಬಿಕೆ ಇಡಿರಿ. ಮತ್ತು ನಿಮ್ಮ ಸಂಪತ್ತುಗಳನ್ನೂ ಜೀವಗಳನ್ನೂ ತೊಡಗಿಸಿ ಅಲ್ಲಾಹನ ಮಾರ್ಗದಲ್ಲಿ ಹೋರಾಡಿರಿ. ನೀವು ಅರಿಯುವವರಾಗಿದ್ದರೆ ಅದುವೇ ನಿಮ್ಮ ಪಾಲಿಗೆ ಉತ್ತಮ
Ayah 12وَأُخۡرَىٰ تُحِبُّونَهَاۖ نَصۡرࣱ مِّنَ ٱللَّهِ وَفَتۡحࣱ قَرِيبࣱۗ وَبَشِّرِ ٱلۡمُؤۡمِنِينَ
ಆಗ ಅವನು ನಿಮ್ಮ ಪಾಪಗಳನ್ನು ಕ್ಷಮಿಸುವನು ಮತ್ತು ತಳದಲ್ಲಿ ನದಿಗಳು ಹರಿಯುತ್ತಿರುವ ಸ್ವರ್ಗತೋಟಗಳೊಳಗೆ ನಿಮ್ಮನ್ನು ಸೇರಿಸುವನು. ಮತ್ತು ಶಾಶ್ವತವಾದ ಆ ಸ್ವರ್ಗತೋಟಗಳಲ್ಲಿ (ನಿಮಗೆ) ನಿವಾಸಗಳನ್ನು ಒದಗಿಸುವನು. ಇದುವೇ ಮಹಾ ವಿಜಯವಾಗಿದೆ
Ayah 13يَٰٓأَيُّهَا ٱلَّذِينَ ءَامَنُواْ كُونُوٓاْ أَنصَارَ ٱللَّهِ كَمَا قَالَ عِيسَى ٱبۡنُ مَرۡيَمَ لِلۡحَوَارِيِّـۧنَ مَنۡ أَنصَارِيٓ إِلَى ٱللَّهِۖ قَالَ ٱلۡحَوَارِيُّونَ نَحۡنُ أَنصَارُ ٱللَّهِۖ فَـَٔامَنَت طَّآئِفَةࣱ مِّنۢ بَنِيٓ إِسۡرَٰٓءِيلَ وَكَفَرَت طَّآئِفَةࣱۖ فَأَيَّدۡنَا ٱلَّذِينَ ءَامَنُواْ عَلَىٰ عَدُوِّهِمۡ فَأَصۡبَحُواْ ظَٰهِرِينَ
ಹಾಗೆಯೇ, ನೀವು ಪ್ರೀತಿಸುವ ಇನ್ನೊಂದು ವಸ್ತು – ಅಲ್ಲಾಹನ ನೆರವು ಮತ್ತು ಶೀಘ್ರ ವಿಜಯ (ಕೂಡಾ ನಿಮಗೆ ಸಿಗಲಿವೆ). ವಿಶ್ವಾಸಿಗಳಿಗೆ ಶುಭ ವಾರ್ತೆ ನೀಡಿರಿ
Ayah 14